ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಭಟ್ಕಳ, ಅಂಕೋಲ, ಜೋಯಿಡಾ, ಕಾರವಾರ ಭಾಗದಲ್ಲಿ ಭಾರೀ ಮಳೆಯಾಗಿದೆ. ಮಳೆ ಹಿನ್ನೆಲೆ ಸಮುದ್ರ ತೀರಕ್ಕೆ ಮೀನುಗಾರರು, ಪ್ರವಾಸಿಗರು ತೆರಳದಂತೆ ನಿಷೇಧ ಹೇರಲಾಗಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗ್ತಿದೆ.