ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಯುತ್ತಿದ್ದು ಚಿತ್ರನಟ ದರ್ಶನ್, ಅವರ ಸ್ನೇಹಿತೆ ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳಲ್ಲಿ ಒಬ್ಬರಿಗೆ ಮೊನ್ನೆ ಜಾಮೀನು ಸಿಕ್ಕಿದೆ ಮಿಕ್ಕವರು ಅದಕ್ಕಾಗಿ ಎದುರು ನೋಡುತ್ತಿದ್ದಾರೆ.