ಸೌದಿ ಅರೇಬಿಯಾಕ್ಕೆ ಎರಡು ದಿನಗಳ ರಾಜ್ಯ ಭೇಟಿಗಾಗಿ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಜೆಡ್ಡಾಗೆ ತಲುಪಿದ್ದಾರೆ. ಅಲ್ಲಿ ಅವರನ್ನು 21 ಗನ್ ಸಲ್ಯೂಟ್ಗಳೊಂದಿಗೆ ಸ್ವಾಗತಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ, ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನಿ ಎಚ್‌ಆರ್‌ಎಚ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಸೌದಿ ಅರೇಬಿಯಾ ದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಭಾರತ-ಸೌದಿ ಅರೇಬಿಯಾ ಕಾರ್ಯತಂತ್ರದ ಪಾಲುದಾರಿಕೆ ಮಂಡಳಿಯ 2ನೇ ನಾಯಕರ ಸಭೆಯ ಸಹ ಅಧ್ಯಕ್ಷತೆ ವಹಿಸಲಿದ್ದಾರೆ.