ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ತಾವೇ ಕತಾರ್ ಅಮೀರ್ ಅವರನ್ನು ಬರಮಾಡಿಕೊಂಡ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ದೆಹಲಿ ವಿಮಾನ ನಿಲ್ದಾಣದಲ್ಲಿ ಕತಾರ್ ಅಮೀರ್ ಶೇಖ್ ತಮೀಮ್ ಬಿನ್ ಹಮದ್ ಅಲ್-ಥಾನಿ ಅವರನ್ನು ಬರಮಾಡಿಕೊಂಡಿದ್ದಾರೆ. ಇಬ್ಬರು ನಾಯಕರು ಆತ್ಮೀಯ ಅಪ್ಪುಗೆಯನ್ನು ವಿನಿಮಯ ಮಾಡಿಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ ಕೂಡ ಕತಾರ್ ಅಮೀರ್ ಅವರನ್ನು ಬರಮಾಡಿಕೊಳ್ಳಲು ಈ ವೇಳೆ ಆಗಮಿಸಿದ್ದರು. ದ್ವಿಪಕ್ಷೀಯ ಸಂಬಂಧಗಳ ವಿವಿಧ ಅಂಶಗಳನ್ನು ಒಳಗೊಂಡಂತೆ ಅವರು ಪ್ರಧಾನಿ ಮೋದಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.