ಶಿವರಾತ್ರಿಯಂದು ಪುಣ್ಯಸ್ನಾನ ಮಾಡಿ ಶಿವನ ಕೃಪೆಗೆ ಪಾತ್ರರಾದ ಜನ

ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ಇಂದು ಶಿವರಾತ್ರಿಯಂದು ಅಂತಿಮ ಪುಣ್ಯಸ್ನಾನ ನಡೆಯುತ್ತಿದ್ದು, ಕುಂಭಮೇಳಕ್ಕೆ ತೆರೆ ಬೀಳಲಿದೆ. ಇಂದು ಬೆಳಗ್ಗೆಯಿಂದಲೇ ತ್ರಿವೇಣಿ ಸಂಗಮದಲ್ಲಿ 41 ಲಕ್ಷ ಜನ ಪವಿತ್ರ ಸ್ನಾನ ಮಾಡಿದ್ದಾರೆ.