ಕರಾವಳಿ ಭಾಗದಲ್ಲಿ ಮತ್ತೊಂದು ನೈತಿಕ ಪೊಲೀಸ್ಗಿರಿ ಪ್ರಕರಣ ಬೆಳಕಿಗೆ ಬಂದಿದೆ. ಉಡುಪಿ ಜಿಲ್ಲೆಯ ಮಲ್ಪೆ ಬೀಚ್ನಲ್ಲಿ ಟೂರಿಸ್ಟ್ ಬೋಟ್ ಸಿಬ್ಬಂದಿ ಪ್ರವಾಸಿಗರ ತಂಡವೊಂದನ್ನು ಅಟ್ಟಾಡಿಸಿ ಹಲ್ಲೆ ನಡೆಸಿದ ಘಟನೆ ಬುಧವಾರ ಸಂಜೆ ನಡೆದಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯದ ವಿಡಿಯೋ ಟಿವಿ9ಗೆ ಲಭ್ಯವಾಗಿದೆ.