ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ ಗಾಯ

ತಮಿಳುನಾಡಿನ ವಿರುಧುನಗರದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ನಾಲ್ವರಿಗೆ ಗಂಭೀರ ಗಾಯವಾಗಿದೆ. ಅಗ್ನಿಶಾಮಕ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಶಿವಕಾಶಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ಕಾರಣದ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.ಘಟನಾ ಸ್ಥಳದ ವೀಡಿಯೊದಲ್ಲಿ ದಟ್ಟವಾದ ಹೊಗೆ ಆಕಾಶಕ್ಕೆ ಏರುತ್ತಿರುವುದನ್ನು ತೋರಿಸಲಾಗಿದೆ.