ಬಿಟ್ಟೋಗ್ಬೇಡ! ಐಎಎಫ್ ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ

ಐಎಎಫ್ ಪೈಲಟ್ ಲೆಫ್ಟಿನೆಂಟ್ ಸಿದ್ಧಾರ್ಥ್ ಯಾದವ್ ಅವರನ್ನು ಇಂದು (ಏಪ್ರಿಲ್ 4) ಅವರ ಹುಟ್ಟೂರು ಹರಿಯಾಣದಲ್ಲಿ ಪೂರ್ಣ ಮಿಲಿಟರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಮಾಡಲಾಯಿತು. ಇದಕ್ಕೂ ಮೊದಲು ಅವರ ಕುಟುಂಬ ಸದಸ್ಯರೊಂದಿಗೆ, ಊರಿನ ಜನರಿಗೆ ಅಂತಿಮ ನಮನ ಸಲ್ಲಿಸಲು ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಸಿದ್ಧಾರ್ಥ್ ಅವರ ಜೊತೆ 10 ದಿನಗಳ ಹಿಂದಷ್ಟೇ ನಿಶ್ಚಿತಾರ್ಥವಾಗಿದ್ದ ಅವರ ಪ್ರೇಯಸಿ ಸೋನಿಯಾ ಯಾದವ್ ಕೂಡ ಸ್ಥಳದಲ್ಲಿ ಹಾಜರಿದ್ದರು. ಅವರಿಬ್ಬರೂ ನವೆಂಬರ್ 2ರಂದು ವಿವಾಹವಾಗಲಿದ್ದರು.