ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರು ‘ಜೈಲರ್’ ಸಿನಿಮಾದ ಗೆಲುವಿನ ಖುಷಿಯಲ್ಲಿದ್ದಾರೆ. ಅವರಿಗೆ ದೇವರ ಬಗ್ಗೆ ಅಪಾರವಾದ ಭಕ್ತಿ ಇದೆ. ಇಂದು (ಆಗಸ್ಟ್ 21) ನಾಗರ ಪಂಚಮಿ ಹಬ್ಬದ ಪ್ರಯುಕ್ತ ತಮನ್ನಾ ಅವರು ಕರ್ನಾಟಕಕ್ಕೆ ಬಂದಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಅವಲಗುರ್ಕಿ ಬಳಿ ಇರುವ ಇಶಾ ಫೌಂಡೇಷನ್ನಲ್ಲಿ ಅವರು ಸದ್ಗುರು ಜಗ್ಗಿವಾಸುದೇವ್ ಜೊತೆ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ನಾಗಮಂಡಲ ಕಾರ್ಯಕ್ರಮದಲ್ಲಿ ತಮನ್ನಾ ಭಾಟಿಯಾ ಜೊತೆ ಸಚಿವರಾದ ಕೆ.ಹೆಚ್. ಮುನಿಯಪ್ಪ, ಡಾ. ಎಂ.ಸಿ. ಸುಧಾಕರ್, ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದಾರೆ.