ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ, ಕಾಮಗಾರಿ ಸ್ಥಗಿತಗೊಳಿಸಲು ಕಾರಣವೇನು?

ಇಸ್ರೇಲ್-ಇರಾನ್ ನಡುವಿನ ಯುದ್ಧದ ಕಾರ್ಮೋಡಗಳು ಈಗ ಬೆಂಗಳೂರಿನ ರಸ್ತೆಗಳ ಮೇಲೂ ಬಿದ್ದಿದೆ. ಯುದ್ಧದ ಹಿನ್ನೆಲೆಯಲ್ಲಿ ಬಿಟುಮೆನ್ (Bitumen) ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ನಗರದ ಪ್ರಮುಖ ರಸ್ತೆಗಳ ಡಾಂಬರೀಕರಣ ಕಾಮಗಾರಿಗಳು ಅರ್ಧಕ್ಕೆ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ತಿಳಿಸಿದ್ದಾರೆ.