ಮಹಾಕುಂಭದಲ್ಲಿ ಮೊದಲ ದಿನವಾದ ಇಂದು 1 ಕೋಟಿ ಭಕ್ತರಿಂದ ತೀರ್ಥ ಸ್ನಾನ

ಇಂದಿನಿಂದ ಉತ್ತರ ಪ್ರದೇಶದ ಪ್ರಯಾಗರಾಜ್​ನಲ್ಲಿ ಮಹಾಕುಂಭಕ್ಕೆ ಚಾಲನೆ ಸಿಕ್ಕಿದೆ. ಇಂದಿನಿಂದ ಫೆಬ್ರವರಿ 26ರವರೆಗೆ ನಡೆಯುವ ಈ ಕುಂಭಮೇಳದಲ್ಲಿ ಮೊದಲ ದಿನವಾದ ಇಂದು 1 ಕೋಟಿ ಜನರು ತೀರ್ಥಸ್ನಾನ ಮಾಡಿದ್ದಾರೆ. ಮುಂದಿನ 45 ದಿನಗಳಲ್ಲಿ 40 ಕೋಟಿಗೂ ಹೆಚ್ಚು ಜನರು ಈ ಮಹಾಕುಂಭದಲ್ಲಿ ಸೇರುವ ನಿರೀಕ್ಷೆಯಿದೆ. ಹರಿದ್ವಾರ, ಪ್ರಯಾಗರಾಜ್, ಉಜ್ಜಯಿನಿ ಮತ್ತು ನಾಸಿಕ್‌ಗಳಲ್ಲಿ ಪ್ರತಿ 12 ವರ್ಷಗಳಿಗೊಮ್ಮೆ ಕುಂಭಮೇಳವನ್ನು ಆಯೋಜಿಸಲಾಗುತ್ತದೆ. ಇವುಗಳಲ್ಲಿ ಪ್ರಯಾಗರಾಜ್‌ನಲ್ಲಿ ನಡೆಯುವ ಮಹಾ ಕುಂಭ ಮೇಳ ಅತ್ಯಂತ ವಿಶೇಷವಾಗಿರುತ್ತದೆ.