ಪ್ರಧಾನಿ ಮೋದಿ ಸ್ವಾಗತಿಸಲು ಶ್ರೀನಗರದಲ್ಲಿ ಜನಜಾತ್ರೆ

ಬೇರೆ ಬೇರೆ ಕಡೆಗಳಿಂದ ಆಗಮಿಸಿರುವ ಮುಸ್ಲಿಂ ಸಮುದಾಯದ ಕಾಶ್ಮೀರಿಗಳು ‘ಮೋದಿ ಸಾಬ್ ಜಿಂದಾಬಾದ್’ ಎಂದು ಕೂಗುತ್ತಿದ್ದಾರೆ. ಕಾಶ್ಮೀರಿ ಪಂಡಿತರು ಮತ್ತು ಅಲ್ಲಿ ವಾಸವಾಗಿರುವ ಇತರ ಸಮುದಾಯಗಳ ಜನ ‘ಹರ್ ಹರ್ ಮೋದಿ ಘರ್ ಘರ್ ಮೋದಿ’ ಅಂತ ಘೋಷಣೆ ಕೂಗುತ್ತಿದ್ದಾರೆ. ಪ್ರಧಾನಿ ಮೋದಿಯವರು ಇಂದು ಶ್ರೀನಗರದ ಭಕ್ಷಿ ಸ್ಟೇಡಿಯಂನಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತಾಡಲಿದ್ದಾರೆ.