ರಾಜ್ಯದಲ್ಲಿ ಚುನಾವಣೆ ಮುಗಿದ ಮೇಲೆ ಪ್ರಜ್ವಲ್ ರೇವಣ್ಣ ಪ್ರಕರಣ ಬೆಳಕಿಗೆ ಬಂತು. ಅದು ಬಂದಾದ ಮೇಲೆ ಹೆಚ್ ಡಿ ಕುಮಾರಸ್ವಾಮಿ ಪ್ರತಿದಿನ ಶಿವಕುಮಾರ್ ಮೇಲೆ ವಾಗ್ದಾಳಿ ನಡೆಸಿದರು. ಹಾಗಾಗಿ ಶಿವಕುಮಾರ್ ರಕ್ತದೊತ್ತಡದಲ್ಲಿ ಏರುಪೇರಾಗಿದ್ದರೆ ಆಶ್ಚರ್ಯಪಡುವಂಥದ್ದೇನೂ ಇಲ್ಲ. ಅವರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವ ಸಂಗತಿಯನ್ನು ನಾವು ಈ ಮೊದಲು ವರದಿ ಮಾಡಿದ್ದೇವೆ.