‘ಕೌಸಲ್ಯ ಸುಪ್ರಜಾ ರಾಮ’ ಇಂದು (ಜುಲೈ 28) ರಿಲೀಸ್ ಆಗಿದೆ. ಈ ಸಿನಿಮಾಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸಿನಿಮಾ ನೋಡಿದ ಸೆಲೆಬ್ರಿಟಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಅರವಿಂದ್ ಕೆಪಿ ಹಾಗೂ ದಿವ್ಯಾ ಉರುಡುಗ ಅವರು ಈ ಚಿತ್ರವನ್ನು ವೀಕ್ಷಿಸಿದ್ದಾರೆ. ಅವರು ಸಿನಿಮಾ ಬಗ್ಗೆ ಮೆಚ್ಚುಗೆಯ ಮಾತನ್ನು ಆಡಿದ್ದಾರೆ. ‘ಇತ್ತೀಚಿನ ದಿನಗಳಲ್ಲಿ ನೋಡಿದ ಅದ್ಭುತ ಸಿನಿಮಾ ಇದು’ ಎಂದು ದಿವ್ಯಾ ಉರುಡುಗ ಹೇಳಿದ್ದಾರೆ. ಅರವಿಂದ್ ಕೂಡ ಸಿನಿಮಾ ಮೆಚ್ಚಿಕೊಂಡಿದ್ದಾರೆ.