ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ 8 ವರ್ಷದ ಧನಂಜಯ್ ಗೌಡ ಅವರು ಕಾರ್ಟ್ ವೀಲ್ ಕರಾಟೆಯಲ್ಲಿ ಅದ್ಭುತ ಸಾಧನೆ ಮಾಡಿದ್ದಾರೆ. 46 ಮ್ಯಾಕ್ಸಿಮಮ್ ಫಾರ್ವರ್ಡ್ ಮತ್ತು ಬ್ಯಾಕ್ವರ್ಡ್ ಸ್ಟಂಟ್‌ಗಳನ್ನು ಮಾಡಿ ಏಷ್ಯಾ ಮತ್ತು ಭಾರತೀಯ ದಾಖಲೆ ಪುಸ್ತಕಗಳಲ್ಲಿ ಸ್ಥಾನ ಪಡೆದಿದ್ದಾರೆ. ಶಾಲಾ ಆಡಳಿತ ಮಂಡಳಿ ಮತ್ತು ಪೋಷಕರು ಅವರ ಸಾಧನೆಯನ್ನು ಶ್ಲಾಘಿಸಿದ್ದಾರೆ. ಧನಂಜಯ್ ಗೌಡರ ಈ ಸಾಧನೆ ಅನೇಕರಿಗೆ ಸ್ಪೂರ್ತಿಯಾಗಿದೆ.