ಬಿಮ್ಸ್ನ ಟ್ರಾಮಾ ಕೇರ್ ಸೆಂಟರ್‌ನಲ್ಲಿ ಮೊಬೈಲ್ ಟಾರ್ಚ್ನಲ್ಲಿ ಚಿಕಿತ್ಸೆ
ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್‌ನಲ್ಲಿ ವೈದ್ಯರು ಮೊಬೈಲ್ ಟಾರ್ಚ್‌ಗಳ ಬೆಳಕಿನಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಿಂದ ಸಾರ್ವಜನಿಕರಲ್ಲಿ ಆಕ್ರೋಶ ಉಂಟಾಗಿದೆ. ಆರೋಗ್ಯ ಸಚಿವಾಲಯ ಘಟನೆ ಕುರಿತು ಸಮಗ್ರ ವರದಿ ಕೇಳಿದೆ.