ಅರ್ಜುನ್ ಸರ್ಜಾ ಅವರು ಕಳೆದ ಹಲವು ವರ್ಷಗಳಿಂದ ದಕ್ಷಿಣ ಭಾರತದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಭಾಷೆಗಳಲ್ಲಿ ನಟಿಸಿದ್ದಾರೆ. ಹೀಗಾಗಿ ಎಲ್ಲಾ ಭಾಷೆಗಳ ಪರಿಚಯ ಅವರಿಗೆ ಇದೆ. ‘ಮಾರ್ಟಿನ್’ ಸಿನಿಮಾ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಮುಂಬೈನಲ್ಲಿ ಅದ್ಧೂರಿಯಾಗಿ ಈ ಕಾರ್ಯಕ್ರಮ ನಡೆದಿದೆ. ಅರ್ಜುನ್ ಸರ್ಜಾ ‘ಮಾರ್ಟಿನ್’ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಹೀಗಾಗಿ ಅವರು ಸುದ್ದಿಗೋಷ್ಠಿಯಲ್ಲಿ ಭಾಗಿ ಆಗಿದ್ದರು. ಅವರು ಆರು ಭಾಷೆಗಳಲ್ಲಿ ಮಾತನಾಡಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಎಲ್ಲರನ್ನೂ ಸ್ವಾಗತಿಸಿದ್ದಾರೆ. ಈ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.