ಕರ್ನಾಟಕ ಸಾರಿಗೆ ಇಲಾಖೆಯ ನಾಲ್ಕು ನಿಗಮಗಳ ನೌಕರರ ಮುಷ್ಕರದ ವೇಳೆ ಕೋಲಾರದಲ್ಲಿ ಕೆಎಸ್ಆರ್ಟಿಸಿ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ. ಮುಂಜಾನೆಯಿಂದ ಬಸ್ ಸಂಚಾರ ಇರಲಿಲ್ಲ. ಇದೀಗ ಪ್ರಯಾಣಿಕರಿಗೆ ನೆರವಾಗುವ ನಿಟ್ಟಿನಲ್ಲಿ ಬಸ್ ಸಂಚಾರ ಆರಂಭಿಸಲು ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾಗ ಕಲ್ಲು ತೂರಾಟ ನಡೆದಿದೆ.