ಬಸನಗೌಡ ಪಾಟೀಲ್ ಯತ್ನಾಳ್, ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದು ಖಚಿತ ಎಂದಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಕೋರ್ ಕಮಿಟಿಯ ನಿರ್ಣಯದಂತೆ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಸ್ಪರ್ಧೆ ಖಚಿತ, ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೋರ್ ಕಮಿಟಿಯಲ್ಲಿ ತಮ್ಮ ಹೆಸರು ಅಂತಿಮಗೊಂಡರೆ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.