ಪ್ರಾಸಿಕ್ಯೂಷನ್ ಕಿಚ್ಚು: ರಾಜ್ಯಾದ್ಯಂತ ಕಾಂಗ್ರೆಸ್​ ಪ್ರತಿಭಟನೆ, ವಾಗ್ದಾಳಿ, ಬೆಂಕಿ ಅನಾಹುತ

ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗಾಗಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅನುಮತಿ ನೀಡಿದ್ದಾರೆ. ಇದನ್ನು ವಿರೋಧಿಸಿ ಕಾಂಗ್ರೆಸ್​ ನಾಯಕರು ರಾಜ್ಯಾದ್ಯಂತ ಪ್ರತಿಭಟನೆ ಮಾಡಿದರು. ಪ್ರತಿಭಟನೆ ವೇಳೆ ವಾಗ್ದಾಳಿ, ಅಲ್ಲಲ್ಲಿ ಅನಾಹುತ ಸಂಭವಿಸಿದವು.