ಪ್ಯಾರಿಸ್ ಒಲಿಂಪಿಕ್ಸ್ ಮುಕ್ತಾಯವಾಗಿದೆ. ಇದೀಗ ಪ್ಯಾರಾಲಿಂಪಿಕ್ ಸರದಿಯಾಗಿದ್ದು, ಅದೇ ಪ್ಯಾರಿಸ್ನಲ್ಲಿ ಆಗಸ್ಟ್ 28 ರಿಂದ ಪ್ರಾರಂಭವಾಗಲಿದ್ದು, ಸೆಪ್ಟೆಂಬರ್ 8 ರವರೆಗೆ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ಭಾರತದಿಂದಲೂ ಪ್ಯಾರಾಲಿಂಪಿಕ್ ಅಥ್ಲೀಟ್ಗಳು ಭಾಗವಹಿಸುತ್ತಿದ್ದು, ಈ ಕ್ರೀಡಾಪಟುಗಳೊಂದಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಸಂವಾದ ನಡೆಸಿದರು.