ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಯುಗಾದಿ, ರಂಜಾನ್ ಹಬ್ಬ ಮತ್ತು ಹನುಮಾನ್ ಜಯಂತಿಯ ಹಿನ್ನೆಲೆಯಲ್ಲಿ ಸೂಕ್ಷ್ಮ ಪ್ರದೇಶಗಳಲ್ಲಿ ಬಾಂಬ್ ಸ್ಕ್ವಾಡ್ ಮತ್ತು ಶ್ವಾನದಳದಿಂದ ತೀವ್ರ ಪರಿಶೀಲನೆ ನಡೆಯಿತು. ರೈಲ್ವೆ ನಿಲ್ದಾಣ, ಚೆನ್ನಪಟ್ಟಣ ಹನುಮಾನ್ ದೇವಸ್ಥಾನ ಮುಂತಾದ ಸ್ಥಳಗಳಲ್ಲಿ ಈ ಪರಿಶೀಲನೆ ನಡೆದಿದೆ. ಯಾವುದೇ ಅಹಿತಕರ ಘಟನೆಗಳನ್ನು ತಡೆಯುವ ಉದ್ದೇಶದಿಂದ ಈ ಕಾರ್ಯಾಚರಣೆ ನಡೆಸಲಾಗಿದೆ.