ಬ್ಯಾರಲ್ ತೇಲುಸೇತುವೆ ನಿರ್ಮಿಸಿ ಅಚ್ಚರಿ ಮೂಡಿಸಿದ ಕಂಕನವಾಡಿ ಗ್ರಾಮದ ರೈತರು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಂಕನವಾಡಿ ಗ್ರಾಮದ ರೈತರು ಬ್ಯಾರಲ್ ತೇಲುಸೇತುವೆ ನಿರ್ಮಾಣ ಮಾಡಿ ಎಲ್ಲರನ್ನು ಅಚ್ಚರಿ ಮೂಡಿಸಿದ್ದಾರೆ. ಕಂಕನವಾಡಿ ಗ್ರಾಮದಿಂದ ಕಂಕನವಾಡಿ ಗುಹೇಶ್ವರ ನಡುಗಡ್ಡೆ ಸಂಪರ್ಕ ಕಲ್ಪಿಸಲು ಕೃಷ್ಣಾ ನದಿ ಅಡ್ಡಲಾಗಿ ಇದನ್ನು ನಿರ್ಮಿಸಿ ಸಾಧನೆ ಮಾಡಿದ್ದಾರೆ.