ಸಚಿವ ಸತೀಶ್ ಜಾರಕಿಹೊಳಿ ಅವರು ಆಯೋಜಿಸಿದ್ದ ಔತಣಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ್, ಕೆ.ಎನ್. ರಾಜಣ್ಣ ಮತ್ತು ಹೆಚ್.ಸಿ. ಮಹದೇವಪ್ಪ ಸೇರಿದಂತೆ ಹಲವು ಪ್ರಮುಖ ವ್ಯಕ್ತಿಗಳು ಭಾಗವಹಿಸಿದ್ದರು. ಬೆಂಗಳೂರಿನಲ್ಲಿರುವ ಜಾರಕಿಹೊಳಿ ಅವರ ಸರ್ಕಾರಿ ನಿವಾಸದಲ್ಲಿ ಈ ಔತಣಕೂಟ ನಡೆದಿದ್ದು, ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ.