ಹೆಚ್ ಡಿ ಕುಮಾರಸ್ವಾಮಿ ಚನ್ನಪಟ್ಟಣದಿಂದ ಎರಡು ಬಾರಿ ಶಾಸಕರಾಗಿ ಒಮ್ಮೆ ಮುಖ್ಯಮಂತ್ರಿಯಾಗಿದ್ದರೂ ಕ್ಷೇತ್ರಕ್ಕಾಗಿ ಏನೂ ಮಾಡಿಲ್ಲ, ಒಬ್ಬ ರಾಜನಂತೆ ವರ್ತಿಸಿದ್ದಾರೆ, ಜನರೊಂದಿಗೆ ಸಂಪರ್ಕವಿಟ್ಟುಕೊಳ್ಳದ ಕಾರಣ ಅವರ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಯೋಗೇಶ್ವರ್ ಹೇಳಿದರು.