ಮಹಾರಾಷ್ಟ್ರದಲ್ಲಿ ಭಾರೀ ಮಳೆ; ಟ್ರಾಫಿಕ್ ಮಧ್ಯೆ ಸಿಲುಕಿದ 8 ಅಡಿ ಉದ್ದದ ಮೊಸಳೆ!

ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಆರೆಂಜ್ ಮತ್ತು ಹಳದಿ ಅಲರ್ಟ್​ ಘೋಷಿಸಲಾಗಿದೆ. ಇದರ ನಡುವೆ ನಿನ್ನೆ ರಾತ್ರಿ ಸುರಿದ ಮಳೆಯಿಂದ ರಸ್ತೆಗಳ ತುಂಬ ನೀರು ಉಕ್ಕಿ ಹರಿಯುತ್ತಿದೆ. ಈ ವೇಳೆ ಟ್ರಾಫಿಕ್​ನಲ್ಲಿ ಸಿಲುಕಿದ್ದ ವಾಹನ ಸವಾರರ ಎದುರು ಬೃಹತ್ ಗಾತ್ರದ ಮೊಸಳೆಯೊಂದು ಪ್ರತ್ಯಕ್ಷವಾಗಿದೆ.