ಧಾರಾಕಾರ ಮಳೆಗೆ ಕೆರೆಯಂತಾದ ರಸ್ತೆಗಳು.. ವಾಹನ ಸವಾರರು ಪರದಾಟ
ಧಾರವಾಡದಲ್ಲಿ ಮಳೆ ಅಬ್ಬರ ಜೋರಾಗಿದೆ. ಭಾರಿ ಮಳೆಗೆ ನಗರದ ಎನ್‌ಟಿಟಿಎಫ್ ಬಳಿ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಧಾರವಾಡ-ಹುಬ್ಬಳ್ಳಿ ರಸ್ತೆ, ಬಿಆರ್‌ಟಿಎಸ್ ಕಾರಿಡಾರ್ ರಸ್ತೆಯಲ್ಲಿ ಮೊಳಕಾಲುದ್ದ ನೀರು ನಿಂತಿದ್ದು, ವಾಹನ ಸವಾರರು ಪರದಾಡುವಂತಾಗಿದೆ.