ಇನ್ನು ಮುಂದೆ 2 ವರ್ಷಕ್ಕೊಮ್ಮೆ ಪೊಲೀಸರ ಟ್ರಾನ್ಸ್​ಫರ್​: ಗೃಹಸಚಿವ ಪರಮೇಶ್ವರ್

ಬೆಂಗಳೂರು, ಸೆ.16: ಒಬ್ಬ ಪೊಲೀಸ್ ಅಧಿಕಾರಿಯನ್ನು ಒಂದೇ ವರ್ಷಕ್ಕೆ ವರ್ಗಾವಣೆ ಮಾಡಲಾಗುತ್ತಿದೆ. ಕೆಲವೊಂದು ಸಂದರ್ಭದಲ್ಲಿ ಕೆಲವೇ ತಿಂಗಳಲ್ಲಿ ಎತ್ತಂಗಡಿ ಮಾಡಲಾಗುತ್ತದೆ. ಈ ಬಗ್ಗೆ ಕನಸಿನ ಕರುನಾಡು ಟಿವಿ9 ಕರ್ನಾಟಕ ಶೃಂಗಸಭೆ 2023ಯಲ್ಲಿ ಗೃಹಸಚಿವ ಡಾ.ಜಿ.ಪರಮೇಶ್ವರ ಅವರನ್ನು ಕೇಳಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಗೃಹಸಚಿವರು ಇನ್ನು ಮುಂದೆ ಎರಡು ವರ್ಷಗಳಿಗೊಮ್ಮೆ ವರ್ಗಾವಣೆ ಮಾಡಲಾಗುತ್ತದೆ ಎಂದರು. ಇದನ್ನು ಮುಂದಿನ ವರ್ಷದಿಂದ ಜಾರಿ ಮಾಡಲು ಕಾನೂನು ರೂಪಿಸಲಾಗುತ್ತಿದೆ. ಹೀಗೆ ಮಾಡಿದರೆ ಅಧಿಕಾರಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸಲು ಅನುಕೂಲವಾಗಲಿದೆ ಎಂದರು.