ಮಂಡ್ಯ, ಆಗಸ್ಟ್ 10: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಅಣೆಕಟ್ಟಯಿಂದ ಇಂದಿನಿಂದಲೇ KRS ವ್ಯಾಪ್ತಿಯ ನಾಲೆಗಳಿಗೆ ನೀರು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಆದರೆ ನೀರಾವರಿ ಸಲಹಾ ಸಮಿತಿ ಸಭೆ ನಿರ್ಣಯದಂತೆ ಷರತ್ತು ವಿಧಿಸಿ ಕೆಆರ್ಎಸ್ನಿಂದ ನಾಲೆಗಳಿಗೆ ನೀರು ಬಿಡುಗಡೆ ಮಾಡಲಾಗುವುದು. ಏನವು ಷರತ್ತುಗಳು? ದೀರ್ಘಾವಧಿ ಬೆಳೆ ಬೆಳೆಯದಂತೆ ರೈತರಿಗೆ ಅಧಿಕಾರಿಗಳು ಸ್ಪಷ್ಟ ಸೂಚನೆ ನೀಡಿದ್ದಾರೆ. 15 ದಿನ ನೀರು ಹರಿಸಿ, 15 ದಿನ ಸ್ಥಗಿತಗೊಳಿಸಲು ತೀರ್ಮಾನಿಸಲಾಗಿದೆ