ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ ಶುರುವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಅಧಿವೇಶನದ ಬಗ್ಗೆ ಮಾತನಾಡಿದ್ದಾರೆ. ಇದು ಈ ಮೂರನೇ ಅವಧಿಯ ಮೊದಲ ಪೂರ್ಣ ಬಜೆಟ್ ಆಗಿದೆ. 2047 ರಲ್ಲಿ ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪವನ್ನು ಈಡೇರಿಸುತ್ತದೆ ಎಂದು ನಾನು ವಿಶ್ವಾಸದಿಂದ ಹೇಳಬಲ್ಲೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.