ಪಾವಗಡದಲ್ಲಿ ಕಾಂಗ್ರೆಸ್ ಮುಖಂಡ ಅನಿಲ್ ಅವರ ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳ್ಳತನವಾಗಿದೆ. ಇದೇ ತಿಂಗಳ 21 ರಂದು ಪಾವಗಡಕ್ಕೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭೇಟಿಯ ಪೂರ್ವಸಿದ್ಧತೆಗಳನ್ನು ಪರಿಶೀಲಿಸಲು ಅನಿಲ್ ಅವರು ತೆರಳಿದ್ದರು. ಆ ಸಂದರ್ಭದಲ್ಲಿ ಈ ಕಳ್ಳತನ ನಡೆದಿದೆ.