ಮೇಲ್ಸೇತುವೆಯಲ್ಲಿ ಚಲಿಸುತ್ತಿದ್ದಾಗ ರೈಲಿನಿಂದ ಕೆಳಗೆ ಜಿಗಿದ ವ್ಯಕ್ತಿ

ಬೆಂಗಳೂರಿನ ಮೆಜೆಸ್ಟಿಕ್​ ಹಾಗೂ ಮಲ್ಲೇಶ್ವರಂ ಮಧ್ಯೆ ವ್ಯಕ್ತಿಯೊಬ್ಬ ಚಲಿಸುತ್ತಿದ್ದ ರೈಲಿನಿಂದ ಮೇಲ್ಸೇತುವೆಯಿಂದ ಕೆಳಕ್ಕೆ ಹಾರಿದ ಘಟನೆ ನಡೆದಿದೆ. ಮೇಲ್ನೋಟಕ್ಕೆ ವ್ಯಕ್ತಿಗೆ ಗಂಭೀರ ಗಾಯಗಳಾಗಿರುವಂತೆ ಕಂಡುಬಂದಿದ್ದು, ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ. ಮದ್ಯಪಾನದ ಅಮಲಿನಲ್ಲಿ ಆತ ಹಾರಿರುವ ಶಂಕೆ ವ್ಯಕ್ತವಾಗಿದೆ. ಹೆಚ್ಚಿನ ಮಾಹಿತಿ ಕಲೆಹಾಕಲು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.