ಬಾಹ್ಯಾಕಾಶ ನೌಕೆ ವಿಫಲವಾದ ನಂತರ ಒಂಬತ್ತು ತಿಂಗಳ ಕಾಲ ಬಾಹ್ಯಾಕಾಶದಲ್ಲಿದ್ದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಸುರಕ್ಷಿತವಾಗಿ ಭೂಮಿಗೆ ಬಂದಿಳಿದಿದ್ದಾರೆ. ಮಂಗಳವಾರ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಹಿಂತಿರುಗಿದ ಸುನಿತಾ ವಿಲಿಯಮ್ಸ್ ಮತ್ತು ವಿಲ್ಮೋರ್ ಭಾರತೀಯ ಕಾಲಮಾನ ಬುಧವಾರ ಬೆಳಗಿನ ಜಾವ 3:27 ಕ್ಕೆ ಫ್ಲೋರಿಡಾ ಕರಾವಳಿಯಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆದರು.