ದರ್ಶನ್ ನಟನೆಯ, ತರುಣ್ ಸುಧೀರ್ ನಿರ್ದೇಶನದ ‘ಕಾಟೇರ’ ಸಿನಿಮಾ ಡಿಸೆಂಬರ್ 29ರಂದು ರಿಲೀಸ್ ಆಗಲಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ ಅಲ್ಲ. ಈ ವಿಚಾರವನ್ನು ದರ್ಶನ್ ಸ್ಪಷ್ಟಪಡಿಸಿದ್ದಾರೆ. ಸಿನಿಮಾ ನೋಡುವ ಕುತೂಹಲ ಅಭಿಮಾನಿಗಳಿಗೆ ಮೂಡಿದೆ. ಈ ಚಿತ್ರದ ಟ್ರೇಲರ್ ಇಂದು (ಡಿಸೆಂಬರ್ 16) ರಿಲೀಸ್ ಆಗಲಿದೆ. ಹುಬ್ಬಳ್ಳಿಯಲ್ಲಿ ಅದ್ದೂರಿ ಕಾರ್ಯಕ್ರಮ ನಡೆಯಲಿದೆ. ಈ ಬಗ್ಗೆ ದರ್ಶನ್ ಅವರು ಆಮಂತ್ರ ನೀಡಿದ್ದಾರೆ. ಹುಬ್ಬಳ್ಳಿಯ ರೈಲ್ವೇ ಸ್ಪೋರ್ಟ್ಸ್ ಗ್ರೌಂಡ್ನಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ರಾಕ್ಲೈನ್ವೆಂಕಟೇಶ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.