ವಯನಾಡ್ ಉಪಚುನಾವಣೆಗೆ ಪ್ರಿಯಾಂಕಾ ಗಾಂಧಿ ಪ್ರಚಾರ; ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ
ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು (ಅಕ್ಟೋಬರ್ 28) ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ಕಟುವಾದ ವಾಗ್ದಾಳಿ ನಡೆಸುವ ಮೂಲಕ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಉಪಚುನಾವಣೆ ಪ್ರಚಾರವನ್ನು ಪ್ರಾರಂಭಿಸಿದರು. ಈ ವೇಳೆ ವಯನಾಡಿನ ಜನರೊಂದಿಗೆ ಬೆರೆತು, ಮಾತುಕತೆ ನಡೆಸಿದರು.