ಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆಗೆ ಅಂತ್ಯ ಹಾಡಲು ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ ಇಟ್ಟಿದೆ. ಇಕೋಫಿಕ್ಸ್ ಎಂಬ ಹೊಸ ತಂತ್ರಜ್ಞಾನದ ಮೂಲಕ ಕ್ಷಿಪ್ರಗತಿಯಲ್ಲಿ ಗುಂಡಿ ಮುಚ್ಚಲು ಮುಂದಾಗಿದೆ. CSIR-CRRI ಮತ್ತು ರಾಮುಕಾ ಗ್ಲೋಬಲ್ ಸರ್ವೀಸಸ್ ನಡುವಿನ ಒಪ್ಪಂದದ ಮೂಲಕ ಈ ತಂತ್ರಜ್ಞಾನವನ್ನು ರಾಜ್ಯಾದ್ಯಂತ ಜಾರಿಗೆ ತರಲಾಗುತ್ತಿದೆ.