ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಕಳೆದ ಆರು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿದೆ. ಅರಣ್ಯ ಇಲಾಖೆಯು ಚಿರತೆಯನ್ನು ಸೆರೆಹಿಡಿಯಲು ನಿರಂತರ ಪ್ರಯತ್ನ ನಡೆಸುತ್ತಿದ್ದರೂ, ಇದುವರೆಗೂ ಯಶಸ್ವಿಯಾಗಿಲ್ಲ. ಇದೀಗ ಮತ್ತೆ ಚಿರತೆ ರಸ್ತೆ ದಾಟುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಸದ್ಯ ಅರಣ್ಯ ಇಲಾಖೆ ಕ್ಯಾಂಪಸ್‌ನಲ್ಲಿ ಮೊಕ್ಕಾಂ ಹೂಡಿದ್ದಾರೆ.