ದೇಶದಾದ್ಯಂತ 76ನೇ ಗಣರಾಜ್ಯೋತ್ಸವ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಿದರು. ಇಂದು ಬೆಳಗ್ಗೆ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದರು. ದೇಶಕ್ಕಾಗಿ ಮಡಿದ ವೀರಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಮೋದಿ ಮತ್ತು ಇತರ ಗಣ್ಯರು ಕರ್ತವ್ಯ ಪಥದಲ್ಲಿನ ವೇದಿಕೆಗೆ ತೆರಳಿದರು.