ಹೊಳೆನರಸೀಪುರ ತಾಲೂಕಿನ ತಟ್ಟೆಕೆರೆ ಬಳಿ ಶಾರ್ಟ್ ಸರ್ಕ್ಯೂಟ್‌ನಿಂದ ಕೆಎಸ್‌ಆರ್‌ಟಿಸಿ ಬಸ್ ಇಂಜಿನ್ ಬಳಿ ಬೆಂಕಿ ಕಾಣಿಸಿಕೊಂಡಿರುವಂತಹ ಘಟನೆ ನಡೆದಿದೆ. ಕೆ.ಆರ್.ಪೇಟೆ ಡಿಪೋಗೆ ಸೇರಿದ ಸಾರಿಗೆ ಬಸ್ ಅವಘಡ ಸಂಭವಿಸಿದ್ದು, ಕೂಡಲೇ ಬಸ್ ನಿಲ್ಲಿಸಿ ಎಲ್ಲಾ ಪ್ರಯಾಣಿಕರನ್ನು ಚಾಲಕ ಕೆಳಗಿಳಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.