ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡುವ ವಿಚಾರವನ್ನು ಬಿಜೆಪಿ ವರಿಷ್ಠರು ಇನ್ನೂ ಬಹಿರಂಗ ಮಾಡಿಲ್ಲ. ಹಾಗಾಗೇ ನಿಖಿಲ್ ಯಾವುದನ್ನೂ ನಿಖರವಾಗಿ ಹೇಳಲ್ಲ. ಕೋಲಾರ ಮತ್ತು ಮಂಡ್ಯ ಕ್ಷೇತ್ರಗಳ ಕಾರ್ಯಕರ್ತರನ್ನು ಮತ್ತು ಮುಖಂಡರನ್ನು ಭೇಟಿಯಾಗಿ ಸಭೆಗಳನ್ನು ನಡೆಸಿ ಅವರು ನೀಡಿರುವ ಫೀಡ್ ಬ್ಯಾಕ್ ಅನ್ನು ಪಕ್ಷದ ವರಿಷ್ಠರಿಗೆ ನೀಡಿದ್ದೇನೆ ಎಂದು ಅವರು ಹೇಳಿದರು.