ಬೆಂಗಳೂರಿನಲ್ಲಿ ನಸುಕಿನಜಾವ ಸುರಿದ ಭಾರಿ ಮಳೆಗೆ ನಗರದ ರಸ್ತೆಗಳಲ್ಲಿ ಮೊಣಕಾಲಿನವರೆಗೂ ನೀರು ನಿಂತಿದೆ. ಇದರಿಂದ ಕಚೇರಿಗಳಿಗೆ ತೆರಳುತ್ತಿದ್ದವರು ಪರದಾಡುವಂತಾಯಿತು. ಪ್ರೀಡಂ ಪಾರ್ಕ್ ರಸ್ತೆಯಲ್ಲಿ ಮಳೆ ನೀರು ನಿಂತು ಅವಾಂತರ ಸೃಷ್ಟಿಯಾಗಿದೆ. ವಾಹನ ಸವಾರರು ಪರದಾಡಿದರು. ಹೀಗಾಗಿ ವಾಹನ ಸಂಚಾರ ನಿಧಾನಗತಿಯಿಂದ ಕೂಡಿದೆ.