ಬೆಂಗಳೂರು, ಜುಲೈ 26: ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಆಗಸ್ಟ್ 4ರಿಂದ 15ರವರೆಗೆ ಬೆಂಗಳೂರಿನ ಲಾಲ್ಬಾಗ್ನಲ್ಲಿ ಫಲಪುಷ್ಪ ಪ್ರದರ್ಶನ (Lalbagh Flower Show) ಏರ್ಪಡಿಸಲಾಗಿದೆ. ದೇಶದ 76ನೇ ಸ್ವಾತಂತ್ರ್ಯ ಮಹೋತ್ಸವದ (Independence Day) ಅಂಗವಾಗಿ ಈ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಇದು ಲಾಲ್ಬಾಗ್ನಲ್ಲಿ ನಡೆಯಲಿರುವ 214ನೇ ಫಲಪುಷ್ಪ ಪ್ರದರ್ಶನವಾಗಿರಲಿದೆ.