ಮಗುವನ್ನು ಎದೆಗವಚಿ ದೆಹಲಿ ರೈಲ್ವೆ ನಿಲ್ದಾಣದಲ್ಲಿ ಗಸ್ತು ತಿರುಗುವ ಮಹಿಳಾ ಕಾನ್​ಸ್ಟೆಬಲ್

ಅತಿ ಹೆಚ್ಚು ಜನ ದಟ್ಟಣೆ ಇರುವ ದೆಹಲಿ ರೈಲ್ವೆ ನಿಲ್ದಾಣದಲ್ಲಿ ತನ್ನ ಕಷ್ಟದ ಬಗ್ಗೆ ಯೋಚಿಸದೆ ಮಗುವನ್ನು ಎದೆಗವಚಿ ಪ್ರಯಾಣಿಕರ ರಕ್ಷಣೆಗಾಗಿ ಗಸ್ತು ತಿರುಗುತ್ತಿರುವ ಆರ್​ಪಿಎಸ್​ಎಫ್ ಮಹಿಳಾ ಕಾನ್​​ಸ್ಟೆಬಲ್ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ರಾತ್ರಿ ಹೊತ್ತು ಪುಟ್ಟ ಮಗುವನ್ನು ಎದೆಗವಚಿಕೊಂಡು ರೈಲ್ವೆ ನಿಲ್ದಾಣದ ಪ್ಲಾಟ್​ಫಾರಂನಲ್ಲಿ ಗಸ್ತು ತಿರುಗುತ್ತಿದ್ದರು. ಕಳೆದ ಎರಡು ದಿನಗಳ ಹಿಂದಷ್ಟೇ ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಉಂಟಾಗಿ 18 ಮಂದಿ ಸಾವನ್ನಪ್ಪಿದ್ದರು.