ವಿದ್ಯುತ್ ವಿತರಣಾ ಘಟಕಕ್ಕೆ ಮೊಸಳೆ ತಂದು ಬಿಟ್ಟ ರೈತರು

ಸರಿಯಾದ ಸಮಯಕ್ಕೆ ವಿದ್ಯುತ್‌ ನೀಡದ್ದಕ್ಕೆ ರೈತರು ಆಕ್ರೋಶಗೊಂಡಿದ್ದು, ವಿದ್ಯುತ್ ವಿತರಣಾ ಘಟಕದ ಆವರಣಕ್ಕೆ ಮೊಸಳೆ ತಂದು ಬಿಟ್ಟಿರುವಂತಹ ಘಟನೆ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಹಾಳ್ ಗ್ರಾಮದಲ್ಲಿ ನಡೆದಿದೆ. ಪ್ರತಿದಿನ ತಡರಾತ್ರಿ ಕರೆಂಟ್ ನೀಡುತ್ತಾರೆ. ಕತ್ತಲೆಯಲ್ಲಿ ಜಮೀನುಗಳಿಗೆ ಹೋಗಿ ನೀರುಣಿಸುವುದು ಹೇಗೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.