ಸ್ಪಂದನಾ ವಿಜಯ್ ರಾಘವೇಂದ್ರ ಅವರ ನಿಧನದ ಸುದ್ದಿ ಕನ್ನಡ ಚಿತ್ರರಂಗಕ್ಕೆ ಆಘಾತ ತಂದಿದೆ. ಅನೇಕ ಸೆಲೆಬ್ರಿಟಿಗಳು ಸ್ಪಂದನಾ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ. ವಿಜಯ್ ರಾಘವೇಂದ್ರ ಅವರಿಗೆ ಸಾಂತ್ವನ ಹೇಳಲಾಗುತ್ತಿದೆ. ರಮೇಶ್ ಅರವಿಂದ್ ಕೂಡ ತಮ್ಮ ಸಾಂತ್ವನದ ನುಡಿಗಳನ್ನು ತಿಳಿಸಿದ್ದಾರೆ. ‘ಈ ಸುದ್ದಿ ಕೇಳಿ ಶಾಕಿಂಗ್ ಎನಿಸಿತು. ವಿಜಯ್ ರಾಘವೇಂದ್ರ ಮತ್ತು ಸ್ಪಂದನಾ ಅವರನ್ನು ಜೋಡಿಯಾಗಿ ನೋಡಿದಾಗ ಬಹಳ ಖುಷಿ ಆಗುತ್ತಿತ್ತು. ಒಬ್ಬರಿಗೊಬ್ಬರು ಸಪೋರ್ಟ್ ಮಾಡುತ್ತಿದ್ದರು. ಆ ರೀತಿ ಇದ್ದಂತಹ ಹುಡುಗಿಗೆ ದಿಢೀರ್ ಅಂತ ಈ ವಯಸ್ಸಿನಲ್ಲಿ ಯಾಕೆ ಹೀಗಾಯಿತು ಎಂಬ ಪ್ರಶ್ನೆ ನಮ್ಮ ಮನಸ್ಸಿನಲ್ಲಿ ಮೂಡುತ್ತದೆ. ಆದರೆ ಆ ರೀತಿಯ ಪ್ರಶ್ನೆಗಳಿಗೆ ಉತ್ತರ ಸಿಗುವುದಿಲ್ಲ. ಇದು ಬಹಳ ದುಃಖದ ವಿಚಾರ. ಯಾರಿಗೂ ಹೀಗೆ ಆಗಬಾರದು’ ಎಂದು ರಮೇಶ್ ಅರವಿಂದ್ ಅವರು ಹೇಳಿದ್ದಾರೆ.