ಅಮೃತ ಭಾರತ ನಿಲ್ದಾಣ ಯೋಜನೆಯ ಭಾಗವಾಗಿ ಪುನರಾಭಿವೃದ್ಧಿಗೊಂಡಿರುವ 103 ರೈಲ್ವೆ ನಿಲ್ದಾಣಗಳನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಗುರುವಾರ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 86 ಜಿಲ್ಲೆಗಳಲ್ಲಿರುವ ನಿಲ್ದಾಣಗಳನ್ನು ಉದ್ಘಾಟಿಸಿದ್ದಾರೆ.ಈ ಉಪಕ್ರಮವು 1,300 ಕ್ಕೂ ಹೆಚ್ಚು ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಸುಧಾರಿತ ಸೌಕರ್ಯಗಳು ಮತ್ತು ಪ್ರಾದೇಶಿಕ ವಾಸ್ತುಶಿಲ್ಪದ ವಿನ್ಯಾಸಗಳೊಂದಿಗೆ ಆಧುನಿಕ ಸಾರಿಗೆ ಕೇಂದ್ರಗಳಾಗಿ ಪರಿವರ್ತಿಸುವ ಮೂಲಕ ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಗುರಿಯನ್ನು ಹೊಂದಿದೆ.