ದೇಶದ ಪ್ರಮುಖ ಮೃಗಾಲಯಗಳಲ್ಲಿ ಒಂದಾಗಿರುವ ಮಂಗಳೂರಿನ ಪ್ರಸಿದ್ಧ ಪಿಲಿಕುಳ ಝೂನಲ್ಲಿ ಭಾರಿ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದೆ. ವನ್ಯಜೀವಿ ಸಂರಕ್ಷಕ ಭುವನ್ ಎಂಬವರು ಗಂಭೀರ ಆರೋಪ ಮಾಡಿದ್ದು, ಹೈಕೋರ್ಟ್ಗೆ ಪಿಐಎಲ್ ಸಲ್ಲಿಸಿ, ಮೃಗಾಲಯವನ್ನು ತಾತ್ಕಾಲಿಕವಾಗಿ ಮುಚ್ಚಬೇಕು ಮತ್ತು ಮುಂದೆ ಅರಣ್ಯ ಇಲಾಖೆ ಅಧೀನಕ್ಕೆ ವಹಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ.