ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಾರ್ಚ್ 27 ರಂದು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಕೆಲ್ಲಾಗ್ ಕಾಲೇಜಿನಲ್ಲಿ ಮಾಡಿದ ಭಾಷಣದ ಸಮಯದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಎದುರಿಸಿದರು. ಪಶ್ಚಿಮ ಬಂಗಾಳದ ಅಭಿವೃದ್ಧಿ ಮತ್ತು ಸಾಮಾಜಿಕ ಯೋಜನೆಗಳ ಬಗ್ಗೆ ಮಾತನಾಡುತ್ತಿದ್ದರು. ಭಾಷಣದ ಮಧ್ಯೆಯೇ ವಿರೋಧ ವ್ಯಕ್ತವಾಯಿತು. ಮಮತಾ 1990 ರ ದಶಕದ ಆರಂಭದ ತಮ್ಮ ಹಳೆಯ ಫೋಟೊವನ್ನು ತೋರಿಸಿದರು, ಅದರಲ್ಲಿ ಅವರು ತಲೆಗೆ ಬ್ಯಾಂಡೇಜ್ ಹಾಕಿಕೊಂಡಿದ್ದರು.