ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್

ಬಿಜೆಪಿಯಿಂದ ಉಚ್ಚಾಟನೆಯಾದ ನಂತರ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೊಸ ಪಕ್ಷ ಸ್ಥಾಪಿಸುವ ಬಗ್ಗೆ ಆಲೋಚಿಸುತ್ತಿದ್ದಾರೆ. ಜನರ ಅಭಿಪ್ರಾಯವನ್ನು ಸಂಗ್ರಹಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಅವರು ಹೇಳಿದ್ದಾರೆ. ಬಿಎಸ್‍ವೈ ಕುಟುಂಬದ ವಿರುದ್ಧ ಆರೋಪಗಳನ್ನು ಮಾಡಿದ ಅವರು, ಹಿಂದೂ ಪರ ಪಕ್ಷದ ಬೇಡಿಕೆ ಹೆಚ್ಚುತ್ತಿದೆ ಎಂದಿದ್ದಾರೆ. ವಿದೇಶಗಳಿಂದಲೂ ಹಣಕಾಸಿನ ನೆರವು ನೀಡುವುದಾಗಿ ಕರೆ ಬರುತ್ತಿದೆ ಎಂದು ಅವರು ತಿಳಿಸಿದ್ದಾರೆ.