ಎಎಸ್ ಪಾಟೀಲ್ ನಡಹಳ್ಳಿ, ಮಾಜಿ ಶಾಸಕ

ಬಸನಗೌಡ ಯತ್ನಾಳ್ ಪರ ಅವರ ಬೆಂಬಲಿಗರು ಪ್ರತಿಭಟನೆ ಮಾಡಿದರೆ ತಮ್ಮದೇನೂ ಆಭ್ಯಂತರವಿಲ್ಲ, ಅವರು ಎಷ್ಟು ಬೇಕಾದರೂ ಪ್ರತಿಭಟನೆ ನಡೆಸಲಿ, ಅದರೆ ಬಸನಗೌಡ ಯತ್ನಾಳ್ ಬಿಜೆಪಿ ನಾಯಕರ ವಿರುದ್ಧ ತಮ್ಮ ನಾಲಗೆ ಹರಿಬಿಟ್ಟರೆ ಪರಿಣಾಮ ನೆಟ್ಟಗಿರಲ್ಲ ಎಂದು ಎಎಸ್ ಪಾಟೀಲ್ ನಡಹಳ್ಳಿ ಹೇಳಿದರು. ಬಿಎಸ್ ಯಡಿಯೂರಪ್ಪ ಮತ್ತು ಬಿವೈ ವಿಜಯೇಂದ್ರ ಪರ ನಿಷ್ಠರು ಈಗ ಯತ್ನಾಳ್​ಗೆ ಎಚ್ಚರಿಕೆ ನೀಡಲಾರಂಭಿಸಿದ್ದಾರೆ.